ADVERTISEMENT

ತೀರ್ಥೋದ್ಭವ: ಕೋವಿಡ್‌ ನೆಗೆಟಿವ್‌ ವರದಿ ತಂದರೆ ಅವಕಾಶ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 12:54 IST
Last Updated 10 ಅಕ್ಟೋಬರ್ 2020, 12:54 IST
ಕಾವೇರಿ ತೀರ್ಥೋದ್ಭವ (ಸಂಗ್ರಹ ಚಿತ್ರ)
ಕಾವೇರಿ ತೀರ್ಥೋದ್ಭವ (ಸಂಗ್ರಹ ಚಿತ್ರ)   

ಮಡಿಕೇರಿ: ತಲಕಾವೇರಿಯಲ್ಲಿ ಇದೇ 17ರಂದು ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರು ಕೋವಿಡ್‌–19 ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್‌ ವರದಿ ತಂದರೆ ಮಾತ್ರ ಅಂದು ಕ್ಷೇತ್ರಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಭಾಗಮಂಡಲದಲ್ಲಿ ಶನಿವಾರ ಶಾಸಕ ಕೆ.ಜಿ.ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

‘ಜಿಲ್ಲೆಯಲ್ಲೂ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿವೆ. ಸ್ಥಳೀಯರು ತೀರ್ಥೋದ್ಭವದ ವೇಳೆ ಮುನ್ನೆಚ್ಚರಿಕೆ ವಹಿಸಬೇಕು. ಅಂತರ ಕಾಯ್ದುಕೊಂಡು ಕಾವೇರಿಯ ದರ್ಶನ ಮಾಡಬೇಕು. ಈ ವರ್ಷ ಜನದಟ್ಟಣೆಗೆ ಅವಕಾಶ ಇರುವುದಿಲ್ಲ. ಆದರೆ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಕೆ.ಜಿ.ಬೋಪಯ್ಯ ಹೇಳಿದರು.

ADVERTISEMENT

‘ಭಾಗಮಂಡಲ, ತಲಕಾವೇರಿ ಕ್ಷೇತ್ರದಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ‘ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.