ADVERTISEMENT

ಕೊಡಗು: 40 ವಿದ್ಯಾರ್ಥಿಗಳಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 20:26 IST
Last Updated 29 ಜುಲೈ 2022, 20:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯ ಹಾಸ್ಟೆಲ್‌ನಲ್ಲಿರುವ 40 ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆಯಾಗಿದೆ. ಶುಕ್ರವಾರದಿಂದ ಆಫ್‌ಲೈನ್‌ ತರಗತಿಗಳನ್ನು ನಿಲ್ಲಿಸಿ, ಆನ್‌ಲೈನ್ ತರಗತಿಗಳನ್ನು ಆರಂಭಿಸಲಾಗಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ಡೀನ್‌ ಡಾ.ಕಾರ್ಯಪ್ಪ, ‘ಹಾಸ್ಟೆಲ್‌ನಲ್ಲಿ 750 ವಿದ್ಯಾರ್ಥಿಗಳಿದ್ದು, 20 ಮಂದಿ ಯಲ್ಲಿ ಲಘು ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಎಲ್ಲರ ಪರೀಕ್ಷೆ ನಡೆಸಲಾಗಿದ್ದು, 40 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲ ರನ್ನೂ ಪ್ರತ್ಯೇಕವಾಗಿರಿಸಲಾಗಿದೆ. ಆನ್‌ಲೈನ್ ತರಗತಿ ಆರಂಭಿಸಲಾಗಿದ್ದು, ಆತಂಕಪಡುವ ಸನ್ನಿವೇಶವಿಲ್ಲ’ ಎಂದರು. ‘ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 44 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 90ಕ್ಕೆ ಏರಿಕೆ ಯಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT