ಮಡಿಕೇರಿ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆ ವೇಳೆಗೆ 849 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 201 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ 349 ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ 299 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 11,343 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 362 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 7420 ಮಂದಿ ಗುಣಮುಖರಾಗಿದ್ದಾರೆ.
3,811 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಮೃತಪಟ್ಟಿದ್ದು, ಒಟ್ಟು 112 ಮರಣ ಪ್ರಕರಣಗಳು
ವರದಿಯಾಗಿದೆ. ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 454 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.