ADVERTISEMENT

ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 12:39 IST
Last Updated 22 ಜೂನ್ 2020, 12:39 IST
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ದುಬೈನಿಂದ ಮರಳಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವ್ಯಕ್ತಿ ನೇರವಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಇನ್ನು ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಾಲ ಗ್ರಾಮದ ವ್ಯಕ್ತಿಗೂ ಕೊರೊನಾ ದೃಢಪಟ್ಟಿದೆ. ಈತ, ಗದಗ ಜಿಲ್ಲೆಗೆ ಹೋಗಿ ವಾಪಸ್ಸಾಗಿದ್ದರು. ಶಿರಂಗಾಲ ಗ್ರಾಮ ಸೀಲ್‌ಡೌನ್‌ ಮಾಡಲಾಗಿದೆ.

ಸೋಂಕಿತ ವಾಸವಿದ್ದ ಸುತ್ತಮುತ್ತಲ 30 ಮನೆಯ ನಿವಾಸಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಕುಟುಂಬದ ನಾಲ್ವರನ್ನು ಮಡಿಕೇರಿಯ ಕೋವಿಡ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ಗೆ ದಾಖಲು ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.