ADVERTISEMENT

ಕೊಡಗು | ಕೋವಿಡ್‌ನಿಂದ ವೃದ್ಧೆ ಸಾವು, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 3:30 IST
Last Updated 12 ಜುಲೈ 2020, 3:30 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ದೃಢಪಟ್ಟಿದ್ದ 86 ವರ್ಷದ ವೃದ್ಧೆಯೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಸೋಂಕಿನಿಂದ ಮೃತರಾದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ವೃದ್ಧೆ ವಿರಾಜಪೇಟೆ ತಾಲ್ಲೂಕಿನ ಗ್ರಾಮವೊಂದವರ ನಿವಾಸಿ.

ಅಧಿಕ ರಕ್ತದ ಒತ್ತಡ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೋವಿಡ್ ತಗುಲಿರುವುದು ಜುಲೈ 6ರಂದು ಬಂದ ವೈದ್ಯಕೀಯ ವರದಿಯಿಂದ ದೃಢಪಟ್ಟಿತ್ತು. ಕೋವಿಡ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದರು.‌

ADVERTISEMENT

ಸರ್ಕಾರ ಮಾರ್ಗಸೂಚಿಯಂತೆ ಭಾನುವಾರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಭಾನುವಾರವೂ ಐದು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.