ADVERTISEMENT

ಮಡಿಕೇರಿ: ಪೊಲೀಸ್‌, ಬ್ಯಾಂಕ್‌ ಉದ್ಯೋಗಿಗೂ ಸೋಂಕು

ಕೊಡಗಿನಲ್ಲಿ ಒಂದೇ ದಿನ 20 ಪ್ರಕರಣ, 62 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 12:38 IST
Last Updated 11 ಜುಲೈ 2020, 12:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 20 ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿವೆ. ಸೋಂಕಿತರ ಸಂಖ್ಯೆ 151ಕ್ಕೇರಿದ್ದು 88 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಗುಣಮುಖರಾಗಿ 62 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ವಿರಾಜಪೇಟೆಯ ಶಾಂತಿನಗರದಲ್ಲಿ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 67 ವರ್ಷದ ಪುರುಷ, 57 ವರ್ಷದ ಮಹಿಳೆ, 28 ವರ್ಷದ ಮಹಿಳೆ, 10 ವರ್ಷದ ಹುಡುಗಿ, 7 ವರ್ಷದ ಹುಡುಗಿಗೆ ಸೋಂಕು ದೃಢಪಟ್ಟಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಅಚ್ಚಪ್ಪ ಬಡಾವಣೆಯ 86 ವರ್ಷದ ಮಹಿಳೆಗೂ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 31 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ADVERTISEMENT

ಮಡಿಕೇರಿಯ ಆಸ್ಪತ್ರೆ ವಸತಿ ಗೃಹದ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 21 ವರ್ಷದ ಪುರುಷರೊಬ್ಬರಿಗೆ ಸೋಂಕು ಧೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕಿನ ನೇರಳೆ ಗ್ರಾಮದ ಜ್ವರ ಲಕ್ಷಣಗಳಿದ್ದ ಮತ್ತು ಬೆಂಳೂರಿನ ಪ್ರಯಾಣದ ಇತಿಹಾಸವಿರುವ 26 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಎಂಎಂ ಲೇಔಟ್‌ನ ಜ್ವರ ಲಕ್ಷಣಗಳಿದ್ದ 38 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ಕುಸುಬೂರು (ಹಳ್ಳದಿಣ್ಣೆ) ಗ್ರಾಮದ 41 ವರ್ಷದ ಪುರುಷ ಬ್ಯಾಂಕ್ ಉದ್ಯೋಗಿ, ಬೆಸ್ತೂರು ಗ್ರಾಮದ 30 ವರ್ಷದ ಪುರುಷ ಬ್ಯಾಂಕ್ ಉದ್ಯೋಗಿ ಒಬ್ಬರಿಗೈ ಸೋಂಕು ದೃಢಪಟ್ಟಿದೆ.
ಬಳಗುಂದ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 41 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಶನಿವಾರಸಂತೆಯ ಗುಡುಗಳಲೆ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 32 ವರ್ಷದ ಪುರುಷರೊಬ್ಬರಿಗೆ ಸೋಂಕು ತಗುಲಿದೆ.

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಎಂ.ಎಂ.ಲೇ ಔಟ್‌ನಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 34 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ಜ್ವರ ಲಕ್ಷಣಗಳಿದ್ದ 50 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಗೋಣಿಕೊಪ್ಪಲು ನೇತಾಜಿ ಲೇಔಟ್‌ನಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 21 ಮತ್ತು 48 ವರ್ಷದ ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ. ಮಡಿಕೇರಿ ನಗರದ ಭಗವತಿ ನಗರದ ನಿವಾಸಿ, ಖಾಸಗಿ ರೆಸಾರ್ಟ್‌ನ ಉದ್ಯೋಗಿ 31 ವರ್ಷದ ಪುರುಷರೊಬ್ಬರಿಗೆ ಸೋಂಕು ತಗುಲಿದೆ.

ಮಡಿಕೇರಿ ಪೊಲೀಸ್‌ ವಸತಿಗೃಹ ನಿಯಂತ್ರಿತ ಪ್ರದೇಶ ಮಡಿಕೇರಿಯ ಪೊಲೀಸ್‌ ಕ್ವಾಟ್ರರ್ಸ್‌ನಲ್ಲಿ ವಾಸವಿದ್ದ 38 ವರ್ಷದ ಪೊಲೀಸ್‌ಗೂ ಕೊರೊನಾ ಸೋಂಕು ತಗುಲಿದೆ. ಪೊಲೀಸ್‌ ಕ್ವಾಟ್ರರ್ಸ್‌ ಅನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.