ಸುಂಟಿಕೊಪ್ಪ: ಬಾಲಕಿಯೊಬ್ಬಳು ಶುಕ್ರವಾರ ಮಗುವಿಗೆ ಜನ್ಮ ನೀಡಿದ್ದು, ಈಕೆ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ತನ್ನ ಅಜ್ಜಿಯ ಮನೆಗೆ ಆಗಾಗ್ಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಯುವಕನು ಸಲಿಗೆ ಬೆಳೆಸಿಕೊಂಡು ದೈಹಿಕ ಸಂಪರ್ಕ ಹೊಂದಿದ್ದಾನೆ. ನಂತರ, ಬಾಲಕಿ ಗರ್ಭಿಣಿಯಾಗಿದ್ದಾಳೆ.
ಶುಕ್ರವಾರ (ಮಾರ್ಚ್ 6) ಮಗುವಿಗೆ ಜನ್ಮ ನೀಡಿದ ಬಳಿಕ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಆತನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.