ಮಡಿಕೇರಿ: ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು,ವಿಜಯೋತ್ಸವ, ಮೆರವಣಿಗೆ ನಡೆಸುವುದು, ರಾಜಕೀಯ ಸಭೆ, ಸಮಾರಂಭ, ವಾಹನ ಜಾಥಾಗಳನ್ನು ನಿಷೇಧಿಸಿದ್ದಾರೆ.
ಎತಎಣಿಕೆ ಕೇಂದ್ರವಾದ ಮಡಿಕೇರಿಯ ಸಂತಜೋಸೇಫರ ಕಾನ್ವೆಂಟ್ ಸುತ್ತಲಿನ 200 ಮೀಟರ್ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿತ ಪ್ರದೇಶವಾಗಿದ್ದು, ಇಲ್ಲಿ ಖಾಸಗಿ ವಾಹನಗಳ ಪ್ರವೇಶ ಹಾಗೂ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.