ADVERTISEMENT

ಕೊಡಗು | ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 5:48 IST
Last Updated 22 ಜನವರಿ 2026, 5:48 IST
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಮಡಿಕೇರಿಯ ಕುಡಿಯುವ ನೀರಿನ ಶುದ್ಧೀಕರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಮಡಿಕೇರಿಯ ಕುಡಿಯುವ ನೀರಿನ ಶುದ್ಧೀಕರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಮಡಿಕೇರಿ: ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಶುದ್ದ ಕುಡಿಯುವ ನೀರು ಶುದ್ದೀಕರಣ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿದರು. ಕುಡಿಯುವ ನೀರು ಸಂಬಂಧಿಸಿದಂತೆ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ವೀಕ್ಷಿಸಿದರು.

ಹಾಗೆಯೇ ಸ್ಟೀವರ್ಟ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧಿಸಿದಂತೆ ಆದಷ್ಟು ಬೇಗ ನಗರಸಭೆ ವ್ಯಾಪ್ತಿಗೆ ಪಡೆಯುವಂತೆ ಅವರು ಸೂಚಿಸಿದರು.

ADVERTISEMENT

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ಎಚ್.ಆರ್.ರಮೇಶ್, ಎಂಜಿನಿಯರ್‌ಗಳಾದ ಸತೀಶ್, ಪ್ರಸನ್ನ ಇತರರು ಕುಡಿಯುವ ನೀರು ಶುದ್ಧಿಕರಣ ಘಟಕದಲ್ಲಿನ ಕಾರ್ಯಚಟುವಟಿಕೆ ಹಾಗೂ ಕಸ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.