ADVERTISEMENT

ನಗರದ ವಿವಿಧೆಡೆ ಜಿಲ್ಲಾಧಿಕಾರಿ ಸಂಚಾರ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 13:10 IST
Last Updated 5 ಡಿಸೆಂಬರ್ 2022, 13:10 IST
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿಯ ವಿವಿಧ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರಲ್ಲಿ ಹೆಸರು ನೋಂದಾಯಿಸುವಂತೆ ಮನವಿ ಮಾಡಿದರು
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿಯ ವಿವಿಧ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರಲ್ಲಿ ಹೆಸರು ನೋಂದಾಯಿಸುವಂತೆ ಮನವಿ ಮಾಡಿದರು   

ಮಡಿಕೇರಿ: ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿಯ ಅಶೋಕಪುರ, ಮಹದೇವಪೇಟೆ, ಮುತ್ತಪ್ಪ ದೇವಾಲಯ, ಎ.ವಿ ಶಾಲೆ, ಕೆಎಸ್ಆರ್‌ಟಿಸಿ ಘಟಕ, ಹೊಸ ಬಡಾವಣೆ ಮತ್ತಿತರ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

18 ವರ್ಷ ತುಂಬಿದವರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಸ್ಥಳಾಂತರ ಆಗಿದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಈ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಡಳಿತ ಜೊತೆ ಸಹಕರಿಸುವಂತೆ ಕೋರಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.