ADVERTISEMENT

ಕೊಡಗರಹಳ್ಳಿ ಶಾಲೆಗೆ ಡಿಡಿಪಿಐ ಭೇಟಿ

ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ್ದ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 13:48 IST
Last Updated 27 ಫೆಬ್ರುವರಿ 2020, 13:48 IST

ಸುಂಟಿಕೊಪ್ಪ: ಸಮೀಪದ ಕೊಡಗರಹಳ್ಳಿ ಶಾಂತಿನಿಕೇತನ ಖಾಸಗಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಶಿಕ್ಷಕರೊಬ್ಬರೂ ಮನಬಂದಂತೆ ಥಳಿಸಿದ್ದ ಹಿನ್ನೆಲೆಯಲ್ಲಿ ಶಾಲೆಗೆ ಗುರುವಾರ ಡಿಡಿಪಿಐ ಪಿ.ಎಸ್.ಮಚ್ಚಾದೋ ಭೇಟಿ ನೀಡಿ ವಿಚಾರಣೆ ನಡೆಸಿದರು.

ಕೆಲವು ದಿನಗಳ ಹಿಂದೆ ನಡೆದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಕಾರಣಕ್ಕೆ 10ರಿಂದ 12 ವಿದ್ಯಾರ್ಥಿಗಳಿಗೆ ಶಿಕ್ಷಕರು ಮಂಗಳವಾರ ಹೊಡೆದಿದ್ದರು. ಕೈಯಲ್ಲಿ ಬಾಸುಂಡೆ ಬಿದ್ದು ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಡಿಡಿಪಿಐ ಅವರು, ಶಿಕ್ಷಕರನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ.

ಮುಂದೆ ಇದು ಪುನಾರಾವರ್ತನೆ ಆಗದಂತೆ ನೋಡಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.