ಸಿದ್ದಾಪುರ: ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ತಿಳಿದು ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರ ಶವಾಗಾರಕ್ಕೆ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿ, ಮೃತ ಓಜ್ ಬಾನು ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದೇ ಸಂದರ್ಭ ಸರ್ಕಾರದ ಪರಿಹಾರ ₹ 15 ಲಕ್ಷ ಹಣದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಎ.ಎಸ್. ಪೊನ್ನಣ್ಣ, ಮೃತ ಮಹಿಳೆಯ ಪತಿಗೆ ಪಿಂಚಣಿ ವ್ಯವಸ್ಥೆ ಮಾಡಲಾಗುವುದು.
ಮುಂದಿನ ಎರಡು ದಿನಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಯ ಸೆರೆಗೆ ಕಾರ್ಯಾಚರಣೆ ನಡೆಸುವಂತೆ ಡಿ.ಸಿ.ಎಫ್ ಶರಣಬಸಪ್ಪ ಅವರಿಗೆ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.