
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಮಡಿಕೇರಿ: ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ಸದಸ್ಯರಿಗೆ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ₹ 5 ಸಾವಿರದಿಂದ ₹ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ತಿಳಿಸಿದರು.
ಏರಿಕೆಯಾದ ಮೊತ್ತವನ್ನು 2027 ಜನವರಿ 27ರ ನಂತರ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ನೀಡುವ ನಿಯಮವನ್ನು ಜಾರಿಗೆ ತರಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮೊತ್ತದ ಏರಿಕೆಗೆ ಅನುಗುಣವಾಗಿ ಮತ್ತೊಮ್ಮೆ ಸದಸ್ಯತ್ವ ಪಡೆಯಲು ನಿವೃತ್ತ ಪೊಲೀಸರು ಪತಿ ಹಾಗೂ ಪತ್ನಿ ತಲಾ ₹1 ಸಾವಿರ ನೀಡಿ ಸದಸ್ಯತ್ವ ಪಡೆಯಬೇಕು. ಮರಣ ನಿಧಿಯ ಲಾಭವನ್ನು ಪತಿ ಹಾಗೂ ಪತ್ನಿ ಇಬ್ಬರಿಗೂ ₹ 10 ಸಾವಿರದಂತೆ ನೀಡಲಾಗುವುದು ಎಂದರು.
2027 ಜನವರಿ 27ಕ್ಕೂ ಮುಂಚೆ ಮರಣ ಹೊಂದಿದವರಿಗೂ ₹ 10 ಸಾವಿರ ನೀಡಬೇಕೆ ಎನ್ನುವ ಬಗ್ಗೆ ಸಂಘದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೂನ್ 30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ 9448587975 ಸಂಪರ್ಕಿಸಬಹುದು ಎಂದರು.
ಸಂಘದ ನಿರ್ದೇಶಕರಾದ ಕೆ.ವೈ.ಹಮೀದ್ ಹಾಗೂ ಎನ್.ಎ.ಜಗದೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.