ADVERTISEMENT

ಕೊಡಗಿನಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆ, ಕೋವಿಡ್‌ನಿಂದ ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 12:24 IST
Last Updated 16 ಜುಲೈ 2020, 12:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ನಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ತೊರೆನೂರು ಗ್ರಾಮದ ನಿಯಂತ್ರಿತ ಪ್ರದೇಶದಲ್ಲಿ ವಾಸವಿದ್ದ 90 ವರ್ಷದ ವೃದ್ಧೆ ಗುರುವಾರ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಮನೆಯಲ್ಲೇ ಅವರು ಸಾವನ್ನಪ್ಪಿದ್ದು, ವೈದ್ಯಕೀಯ ಸಿಬ್ಬಂದಿ ತೆರಳಿ ರ್‍ಯಾಪಿಡ್‌ ಆ್ಯಂಟಿಜನ್‌ ಪರೀಕ್ಷಾ ಕಿಟ್‌ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ದೃಢಪಟ್ಟಿದೆ. ಇವರಿಗೆ ಬೇರೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.