ಮಡಿಕೇರಿ: ವಿದ್ಯುತ್ ತಂತಿಯ ಬದಿಯಲ್ಲಿರುವ ಮರದ ಕೊಂಬೆಗಳನ್ನು ಕಡಿಯುವುದು ಹಾಗೂ ವಿದ್ಯುತ್ ಮಾರ್ಗದ ನಿರ್ವಹಣೆ, ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಡಿ. 7 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಿಲ್ಲೆಯ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಿದ್ದಾಪುರ, ಕರಡಿಗೋಡು, ಅವರೆಗುಂದ, ಪಾಲಂಗಾಲ, ಕೆದಮುಳ್ಳೂರು, ಬೇಟೋಳಿ, ಗುಂಡಿಗೆ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.