ADVERTISEMENT

ಮಡಿಕೇರಿ: ದೇವರಾಜ ಅರಸ್ ಜನ್ಮ ದಿನಾಚರಣೆ ನಾಳೆ

ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆ ವತಿಯಿಂದ ಆಯೋಜನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 4:15 IST
Last Updated 19 ಆಗಸ್ಟ್ 2024, 4:15 IST
ಟಿ.ಪಿ.ರಮೇಶ್‌ 
ಟಿ.ಪಿ.ರಮೇಶ್‌    

ಮಡಿಕೇರಿ: ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯಿಂದ ಆ. 20ರಂದು ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ‘ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸ್ ಅವರು 109ನೇ ಜನ್ಮ ದಿನಾಚರಣೆ’ಯು ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

‘ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಲಿದ್ದು, ಮೈಸೂರಿನ ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಡಾ.ಎಂ.ಜಿ.ಅರಸ್ ಪ್ರಧಾನ ಭಾಷಣ ಮಾಡಲಿದ್ದಾರೆ’ ಎಂದು ಟಿ.ಪಿ.ರಮೇಶ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 8 ಮಂದಿಯನ್ನು ಸನ್ಮಾನಿಸಲಿದ್ದಾರೆ. ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಲ್.ದಿವಾಕರ, ವಕೀಲ ಬಿ.ಇ.ಜಯೇಂದ್ರ, ಮುಖಂಡರಾದ ಎಚ್.ಎಂ.ನಂದಕುಮಾರ್, ಕೆ.ಎ.ಯಾಕೂಬ್, ಎಂ.ಎಚ್.ಅಬ್ದುಲ್ ರೆಹಮಾನ್ ಭಾಗವಹಿಸಲಿದ್ದಾರೆ ಎಂದರು.

ADVERTISEMENT

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್‌ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ರಕ್ತದಾನಿ ಬಿ.ಎಂ.ರಾಮಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್‌ ಯಲ್ಲಪ್ಪ, ಸೋಮವಾರಪೇಟೆಯ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಆದಂ, ಸಮಾಜಸೇವಕ ಪಿ.ಎಂ.ಲತೀಫ್, ವಕೀಲರಾದ ಕೆ.ವಿ.ಸುನಿಲ್ ಹಾಗೂ ಬೆಟ್ಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚಳಿಯಂಡ ಕಮಲಾ ಉತ್ತಯ್ಯ ಅವರು ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಾದ ಐಗೂರಿನ ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್ ಹಾಗೂ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಕೆ.ಆರ್.ಬಬಿತಾ ಅವರನ್ನು ಸನ್ಮಾನಿಲಾಗುತ್ತದೆ ಎಂದರು.

ಮುಖಂಡರಾದ ಮುನೀರ್ ಅಹಮ್ಮದ್, ಬೇಬಿ ಮ್ಯಾಥ್ಯೂ,ಆರ್.ಪಿ.ಚಂದ್ರಶೇಖರ್, ಟಿ.ಎಂ.ಮುದ್ದಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.