ಪ್ರತಿಭಟನೆ
ಮಡಿಕೇರಿ: ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಇಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಈ ರೀತಿ ಅಪಪ್ರಚಾರ ಮಾಡುತ್ತಿರುವವರ ಉದ್ದೇಶವನ್ನು ಬಯಲಿಗೆಳೆಯಬೇಕು. ಅಪಪ್ರಚಾರ ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಇಲ್ಲಿನ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.
ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಟಿ.ರಂಗಸ್ವಾಮಿ 'ನಾವು ಎಸ್ ಐ ಟಿ ತನಿಖೆಯನ್ನು ಸ್ವಾಗತಿಸುತ್ತೇವೆ. ಮುಂದಿನ ದಿನಗಳಲ್ಲಿ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.