ಸುಂಟಿಕೊಪ್ಪ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಭೂಮಿಕ ಸ್ವಸಹಾಯ ಸಂಘ ಸಂಯುಕ್ತಾಶ್ರಯದಲ್ಲಿ ಮಕ್ಕಳಿಗೆ ಅಜ್ಜಿಯ ಕೈ ತುತ್ತು ಮತ್ತು ಸ್ವ ಉದ್ಯೋಗದ ಕುರಿತು ಕಾನ್‌ಬೈಲ್ ವಿಭಾಗದ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.
ಸಮೀಪದ ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಾಲಿನಿ, ಮಕ್ಕಳಿಗೆ ಅಜ್ಜಿಯಂದಿರ ಕೈ ತುತ್ತು ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳಲ್ಲಿ ಹಿಂದಿನ ಕಾಲದ ಆಚಾರ ವಿಚಾರ, ವೈಚಾರಿಕತೆ ಮರೆಯಾಗುತ್ತಿದೆ. ಈ ದಿಸೆಯಲ್ಲಿ ಮಕ್ಕಳಿಗೆ ಹಿರಿಯರ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸ್ವ ಉದ್ಯೋಗದಿಂದ ಸುಭದ್ರ ಜೀವನ ನಿರ್ವಹಿಸಬಹುದು. ಕುಟುಂಬಗಳ ನಿರ್ವಹಣೆಗೂ ಸಹಕಾರಿಯಾಗಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಭೂಮಿಕ ತಂಡದ ಸದಸ್ಯೆ ಪೂವಮ್ಮ ವಹಿಸಿದ್ದರು. ಗ್ರಾಮದ ಹಿರಿಯರಿಂದ ಮಕ್ಕಳಿಗೆ ಕೈ ತುತ್ತು ನೀಡಲಾಯಿತು.
ಕಾನ್‌ಬೈಲ್ ವ್ಯಾಪ್ತಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಕಾನ್‌ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.