
ಪ್ರಜಾವಾಣಿ ವಾರ್ತೆ
ವಿರಾಜಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕು ವ್ಯಾಪ್ತಿಯ ಒಟ್ಟು 67 ಜನರಿಗೆ ಮಾಸಾಶನ ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವು ಹೊಸದಾಗಿ ಮಾಸಾಶನ ಪಡೆಯುತ್ತಿರುವ 6 ಜನರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಹರೀಶ್ ಪಿ, ವಲಯದ ಮೇಲ್ವಿಚಾರಕ ಶಿವಕುಮಾರ್ ಹಾಗೂ ಪ್ರತಾಪ್, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಒಕ್ಕೂಟದ ಕಾರ್ಯದರ್ಶಿ, ಜನ ಜಾಗೃತಿ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.