ADVERTISEMENT

ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತೊಡಕು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 7:28 IST
Last Updated 25 ಸೆಪ್ಟೆಂಬರ್ 2025, 7:28 IST
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ತಾಂತ್ರಿಕ ಸಮಸ್ಯೆ ಮುಂದುವರಿದಿದ್ದರಿಂದ ಸಮೀಕ್ಷಕರು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಇಲ್ಲಿ ನಡೆಯುತ್ತಿದ್ದ ಕಾಫಿ ದಸರೆ ವೇಳೆಯೇ ಕೆಲವು ಸಮೀಕ್ಷಕರು ಭೇಟಿ ಮಾಡಿ ಸಮಸ್ಯೆ ಕುರಿತು ಹೇಳಿಕೊಂಡರು. ನಂತರ, ಕೆಲವರು ಕಚೇರಿಯಲ್ಲಿ ಮನವಿ ಸಲ್ಲಿಸಿದರು.

‘ಒಟಿಪಿ ಬಾರದೇ ಸಮೀಕ್ಷೆ ಪೂರ್ಣಗೊಳ್ಳುತ್ತಿಲ್ಲ. ಒಂದೊಂದು ಮನೆಯಲ್ಲೂ ಸಮಯ ಆಗುತ್ತಿದೆ. ಮನೆಯವರೂ ಬೇಸರ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸಮೀಕ್ಷಕರೊಬ್ಬರು, ತಿಳಿಸಿದರು.

ADVERTISEMENT

‘ಒಂದು ಜಿಲ್ಲೆ ಅಥವಾ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ನಡೆಸಿ, ಸಮಸ್ಯೆಗಳನ್ನು ನಿವಾರಿಸಿ ನಂತರ ಇಡೀ ರಾಜ್ಯಕ್ಕೆ ಅನ್ವಯಿಸಬೇಕಾಗಿತ್ತು. ಆದರೆ, ಪೂರ್ವಸಿದ್ಧತೆ ಇಲ್ಲದೇ ಮೊಬೈಲ್‌ ಆ್ಯಪ್‌ನಲ್ಲಿ ಸಮೀಕ್ಷೆಗೆ ಮುಂದಾಗಿದ್ದು ತೊಡಕಾಗಿ ಪ‍ರಿಣಮಿಸಿದೆ’ ಎಂದು ನಾಗರಿಕರೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.