ADVERTISEMENT

ಕುಶಾಲನಗರ: ಜಿಲ್ಲಾಮಟ್ಟದ ಅಂಗವಿಕಲ ಮಕ್ಕಳ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 5:54 IST
Last Updated 13 ಜನವರಿ 2026, 5:54 IST
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಡಗು ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14 ಮತ್ತು 17 ವರ್ಷದೊಳಗಿನ ಅಂಗವಿಕಲ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾಕೂಟವನ್ನು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉದ್ಘಾಟಿಸಿದರು
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಡಗು ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14 ಮತ್ತು 17 ವರ್ಷದೊಳಗಿನ ಅಂಗವಿಕಲ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾಕೂಟವನ್ನು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉದ್ಘಾಟಿಸಿದರು   

ಕುಶಾಲನಗರ: ದೈಹಿಕ, ಮಾನಸಿಕ ನ್ಯೂನತೆಯುಳ್ಳ ಅಂಗವಿಕಲ ಮಕ್ಕಳ ಶಿಕ್ಷಣಕ್ಕೆ ಸಮಾಜದ ಎಲ್ಲ ವರ್ಗದವರ ಪ್ರೋತ್ಸಾಹ ಅಗತ್ಯವಿದೆ’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 2025-26ನೇ ಸಾಲಿನ ಕೊಡಗು ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 14 ಮತ್ತು 17 ವರ್ಷದೊಳಗಿನ ಅಂಗವಿಕಲ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲ ಮಕ್ಕಳಿಗೂ ಕ್ರೀಡಾಕೂಟದಲ್ಲಿ ಅವಕಾಶ ನೀಡಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವ ಸರ್ಕಾರದ ಯೋಜನೆ ತುಂಬ ಅತ್ಯುತ್ತಮವಾಗಿದೆ. ಇದರ ಸದ್ಬಳಕೆ ಬಳಸಿಕೊಳ್ಳಬೇಕು ಎಂದರು.

ADVERTISEMENT

ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಿಂದ ಅಂಗವಿಕಲ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತದೆ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರಾಮನಗರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಲು ಅವಕಾಶ ನೀಡಲಾಗುವುದು. ಜಿಲ್ಲೆಯಿಂದ ಐದು ನ್ಯೂನತೆಗಳಾದ ಕಾಲು, ಕೈ ಉಳ್ಳವರು, ಪೂರ್ಣ ಅಂಧರು, ಭಾಗಶಃ ಅಂಧರು, ವಾಕ್ ಮತ್ತು ಶ್ರವಣದೋಷ ವಿದ್ಯಾರ್ಥಿಗಳಿಗೆ ವಿವಿಧ ಪ್ರಕಾರದ ಸ್ಪರ್ಧೆ ಏರ್ಪಡಿಸಲಾಗುತ್ತದೆ ಎಂದು ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ವಿಷಯ ಪರಿವೀಕ್ಷಕರಾದ ಬಿಂದು ಹಾಗೂ ಶರ್ಮಿಳಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸುರೇಶ್ ಕುಮಾರ್. ಸುಜಾತಾ, ನಾಗೇಶ್, ಜಿಲ್ಲೆಯ ಬಿಐಆರ್‌ಟಿ, ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.