ಸಿದ್ದಾಪುರ: ಧಾರಾಕಾರ ಮಳೆ ಹಾಗೂ ಗಾಳಿಗೆ ನೆಲ್ಯಹುದಿಕೇರಿ ಎಂ.ಜಿ ಕಾಲೋನಿ ನಿವಾಸಿ ಲೀಲಾವತಿ ಎಂಬುವರ ಮನೆ ಕುಸಿದಿದ್ದು, ಗುರುವಾರ ಸ್ಥಳ ಪರಿಶೀಲಿಸಿದ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಲೀಲಾವತಿ ಕುಟುಂಬಕ್ಕೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.
ವಾಲ್ನೂರು ತ್ಯಾಗತ್ತೂರು ಗ್ರಾಮದ ಬೀರಾನ್ ಎಂಬುವರ ಮನೆ ಮೇಲೆ ಮರ ಬಿದ್ದು, ಹಾನಿಯಾಗಿದ್ದು, ಕುಟುಂಬಕ್ಕೆ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಯಿತು. ಈ ಸಂದರ್ಭ ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಆಡಳಿತ ಅಧಿಕಾರಿ ಸಚಿನ್, ಗ್ರಾ.ಪಂ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.