
ರಾಜ್ಯದಲ್ಲಿಯೇ ಅತ್ಯುತ್ತಮ ಸೇವಾ ಸಾಧನೆ ಪ್ರಶಸ್ತಿ ಗಳಿಸಿದ ಕೊಡಗು ರೆಡ್‌ಕ್ರಾಸ್‌ನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿನಂದಿಸಿದರು. ಕೊಡಗು ರೆಡ್‌ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮುರಳೀಧರ್, ನಿರ್ದೇಶಕರಾದ ಎಂ.ಧನಂಜಯ್, ಸತೀಶ್ ರೈ, ವಿಜಯ್ ಶೆಟ್ಟಿ. ಶರತ್ ಶೆಟ್ಟಿ ಭಾಗವಹಿಸಿದ್ದರು
ಮಡಿಕೇರಿ: ರಾಜ್ಯದಲ್ಲಿಯೇ ಅತ್ಯುತ್ತಮ ಸೇವಾ ಸಾಧನೆ ಪ್ರಶಸ್ತಿ ಗಳಿಸಿದ ಕೊಡಗು ರೆಡ್‌ಕ್ರಾಸ್‌ನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿನಂದಿಸಿದರು.
ಸಂಸ್ಥೆಯ ಸಾಧನೆಗಳಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿಯೂ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವನ್ನು ಸಂಸ್ಥೆಯ ಜನಪರ ಕಾರ್ಯಕ್ರಮಗಳಿಗೆ ನೀಡುವುದಾಗಿ ಭರವಸೆ ನೀಡಿದರು.
ಕೊಡಗು ರೆಡ್‌ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮುರಳೀಧರ್, ನಿರ್ದೇಶಕರಾದ ಎಂ.ಧನಂಜಯ್, ಸತೀಶ್ ರೈ, ವಿಜಯ್ ಶೆಟ್ಟಿ. ಶರತ್ ಶೆಟ್ಟಿ ಭಾಗವಹಿಸಿದ್ದರು.
ಸಂಸ್ಥೆಯ ವಿವಿಧ ಕಾರ್ಯಯೋಜನೆಗಳನ್ನು ಪರಿಗಣಿಸಿ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದಲ್ಲಿ ಈಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ಪ್ರಶಸ್ತಿ ಪ್ರದಾನ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.