ಸಿದ್ದಾಪುರ: ಪ್ರವಾಹ ಭೀತಿ ಎದುರಿಸುತ್ತಿರುವ ಕರಡಿಗೋಡು ಗ್ರಾಮಕ್ಕೆ ಜಿಲ್ಲಾಧಿಕಾರಿ ವೆಂಕಟರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನದಿ ದಡದ ಜಲಾವೃತಗೊಳ್ಳುತ್ತಿರುವ ಮನೆಗಳ ಮಂದಿಯನ್ನು ತ್ವರಿತ ಪರಿಹಾರ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಪರಿಹಾರ ಕೇಂದ್ರ: ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹ ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ತಹಶೀಲ್ದಾರರಿಂದ ಮಾಹಿತಿ ಪಡೆದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ
ಕುಶಾಲನಗರ: ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ–ಗಾಳಿಗೆ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಹಾನಿ ಉಂಟಾಗಿದ್ದು, ಆರು ಸಂತ್ರಸ್ತ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಪಟ್ಟಣ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯ ಗೋಡೆ ಹಾಗೂ ಚಾವಣಿಗೆ ಹಾನಿಯಾಗಿದೆ. ಅತ್ತೂರು, ದೊಡ್ಡತ್ತೂರು, ಬಸವನತ್ತೂರು ಗ್ರಾಮಗಳಲ್ಲಿ ಹಾನಿಯಾಗಿರುವ ಮನೆಗಳಿಗೆ ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅತ್ತೂರು ಹಾಗೂ ಮಾದಪಟ್ಟಣ ಗ್ರಾಮಕ್ಕೆ ಶಾಸಕ ಡಾ.ಮಂತರ್ ಗೌಡ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ್ದು, ಪೂರ್ಣ ಮನೆ ಹಾನಿಗೀಡಾದ 2 ಕುಟುಂಬದವರಿಗೆ ಆಹಾರ ಕಿಟ್ ವಿತರಿಸಿದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಮುಖಂಡರಾದ ರಮೇಶ್, ಶಶಿಭೀಮಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.