
ಪ್ರಜಾವಾಣಿ ವಾರ್ತೆಸೋಮವಾರಪೇಟೆ: ಇಲ್ಲಿನ ಲಯನ್ಸ್ ಕ್ಲಬ್ ಆಫ್ ಸೋಮವಾರಪೇಟೆಗೆ ಜೂ 7ರಂದು ಲಯನ್ಸ್ ಜಿಲ್ಲಾ ಗವರ್ನರ್ ಡಾ.ಮೆಲ್ವಿನ್ ಡಿಸೋಜಾ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಸಂಜೆ 4.30ಕ್ಕೆ ಗರಗಂದೂರು ‘ಬಿ’ ಗ್ರಾಮದಲ್ಲಿ ಸೂಚನಾ ಫಲಕ, 5.30ಕ್ಕೆ ಸೋಮವಾರಪೇಟೆ ಬಸವೇಶ್ವರ ರಸ್ತೆ ಹಾಗೂ ಪೊಲೀಸ್ ಸ್ಟೇಷನ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ನಡೆಯಲಿದೆ.
7.15ಕ್ಕೆ ಗೌಡ ಸಮಾಜದ ಶ್ರೀಗಂಧ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್.ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಸಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.