
ಚಿತ್ರ ಕೃಪೆ : ಪ್ರಾತಿನಿಧಿಕ ಚಿತ್ರ
ಮಡಿಕೇರಿ: 2025-26ನೇ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಪುರುಷ ಹಾಗೂ ಮಹಿಳೆಯರಿಗೆ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆ. 30 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ಏರ್ಪಡಿಸಲಾಗಿದೆ.
ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್ (ಪುರುಷರಿಗೆ ಮಾತ್ರ), ಕೊಕೊ, ಕಬಡ್ಡಿ, ಬಾಸ್ಕೆಟ್ ಬಾಲ್, ಕುಸ್ತಿ, ಹಾಕಿ (ಮಹಿಳೆಯರಿಗೆ ಮಾತ್ರ), ಹ್ಯಾಂಡ್‍ಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, ಟೆನ್ನಿಸ್, ನೆಟ್‍ಬಾಲ್ ಇರಲಿದೆ.
ಜಿಲ್ಲಾ ಮಟ್ಟದ ಯೋಗಾಸನದಲ್ಲಿ ಕಡ್ಡಾಯವಾಗಿ ಮಾಡಬೇಕಾದ ಆಸನಗಳು ಪಾದ ಹಸ್ತಾಸನ, ಆಕರ್ಣ ಧನುರಾಸನ, ಊದ್ರ್ವಧನುರಾಸನ, ಅರ್ಥಮತ್ಸೇಂದ್ರಿಯ ಆಸನ.
ಆ.30ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು ನಡೆಯಲಿದೆ.
ಸೆ. 4ರಂದು ಪೊನ್ನಂಪೇಟೆ ಮಿನಿ ಕ್ರೀಡಾಂಗಣದಲ್ಲಿ ಹಾಕಿ (ಪುರುಷರಿಗೆ ಮಾತ್ರ) ಪಂದ್ಯಾವಳಿ ನಡೆಯಲಿದೆ.
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಹಾಗೂ ಗುಂಪು ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳು ಹಾಗೂ ಜಿಲ್ಲಾ ಮಟ್ಟದಲ್ಲಿರುವ ಕ್ರೀಡೆಗಳಲ್ಲಿ ನೇರವಾಗಿ ಭಾಗವಹಿಸುವ ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು.
ಮಾಹಿತಿಗೆ ಮೊ: 9980887499, 9480032712 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.