ADVERTISEMENT

ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆ ಪ್ರಕ್ರಿಯೆ: ಚುನಾವಣಾ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 8:41 IST
Last Updated 30 ಡಿಸೆಂಬರ್ 2025, 8:41 IST
   

ಮಡಿಕೇರಿ: ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತ ಸದಸ್ಯರ ಪೈಕಿ 8 ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮನಿರ್ದೇಶನ ಪತ್ರವನ್ನು ನಿಗದಿತ ನಮೂನೆ-1 ರಲ್ಲಿ ಚುನಾವಣಾಧಿಕಾರಿಗಳಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್‍ರವರಿಗೆ ಸಲ್ಲಿಸಬಹುದು.

ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಹಕರಿಸಲು ಸಹಾಯಕ ಚುನಾವಣಾಧಿಕಾರಿಯಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ ಅವರನ್ನು ನೇಮಿಸಲಾಗಿದೆ. 

ADVERTISEMENT

ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪೈಕಿ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಸದಸ್ಯರ ಸಂಖ್ಯೆ 8, ಜನವರಿ, 2 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸಬಹುದು.

ಜ. 2ರಂದು ಮಧ್ಯಾಹ್ನ 4 ಗಂಟೆಯಿಂದ ಸಂಜೆ 5.30ರವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಜ. 3ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಹಿಂಪಡೆದುಕೊಳ್ಳಬಹುದು.

ಮತದಾನ ಅವಶ್ಯವಿದ್ದರೆ ಜ. 5ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಮತಗಳ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.