ADVERTISEMENT

ಹೆಣ್ಣುಮಕ್ಕಳಿಗೆ ಅಪಮಾನ ಮಾಡುವಂತಹ HDK ಹೇಳಿಕೆಗೆ ಪ್ರಧಾನಿ ಉತ್ತರಿಸಲಿ; ಡಿಕೆಶಿ

’ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆಂಬ ಎಚ್‌ಡಿಕೆ ಹೇಳಿಕೆಗೆ ಮೋದಿ ಉತ್ತರಿಸಲಿ’

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 8:57 IST
Last Updated 14 ಏಪ್ರಿಲ್ 2024, 8:57 IST
   

ಮಡಿಕೇರಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಇಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಇದು ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಾರಸ್ವಾಮಿ ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಅದರ ಫಲ ಅನುಭವಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.