ADVERTISEMENT

ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿಗೆ ಡಾ.ಜೆ.ಜಿ.ಮಂಜುನಾಥ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 7:14 IST
Last Updated 19 ಸೆಪ್ಟೆಂಬರ್ 2024, 7:14 IST
ಮಂಜುನಾಥ್
ಮಂಜುನಾಥ್   

ಮಡಿಕೇರಿ: ಯು.ಎಸ್.ಎ.ಯ ಸ್ಟ್ಯಾನ್‍ಫೊರ್ಡ್ ವಿಶ್ವವಿದ್ಯಾಲಯ ಮತ್ತು ಎಲ್ಎಸ್‍ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ 2 ವಿಜ್ಞಾನಿಗಳ ಪಟ್ಟಿಯಲ್ಲಿ ಇಲ್ಲಿನ ಡಾ.ಜೆ.ಜಿ.ಮಂಜುನಾಥ ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ.

ಇಲ್ಲಿನ ಫೀಲ್ಡ್‌ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು ‘ಅನಲಿಟಿಕಲ್ ಕೆಮಿಸ್ಟ್ರಿ ಅಂಡ್ ಎನರ್ಜಿ’ ವಿಷಯದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8,257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ.

ಇವರು 194 ಅಂತರರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.