ADVERTISEMENT

ಮಾದಕ ವಸ್ತುವಿನಿಂದ ದೂರವಿರಿ: ಎಚ್.ಆರ್.ಪವಿತ್ರ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 4:54 IST
Last Updated 28 ಡಿಸೆಂಬರ್ 2025, 4:54 IST
ಸೋಮವಾರಪೇಟೆ ಸಮೀಪದ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು
ಸೋಮವಾರಪೇಟೆ ಸಮೀಪದ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು   

ಸೋಮವಾರಪೇಟೆ: ‘ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ದು, ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಸಾರ್ವಜನಿಕರು, ಪೋಷಕರು ಸೇರಿದಂತೆ ಇಂದಿನ ಯುವಜನತೆ ಮತ್ತು ವಿದ್ಯಾರ್ಥಿಗಳ ಸಹಕಾರ ಅತ್ಯವಶ್ಯಕವಾಗಿದೆ’ ಎಂದು ಕಾನೂನು ನೆರವು ಅಭಿರಕ್ಷಕರಾದ ಎಚ್.ಆರ್.ಪವಿತ್ರ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ವಿಶ್ವ ಮಾನವ ಕುವೆಂಪು ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಳಿಗೆ ಶನಿವಾರ ಅಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆ ಬಗ್ಗೆ ಮಾಹಿತಿ ದೊರೆತಲ್ಲಿ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಕಾನೂನು ನೆರವು ಸೇವೆಗಳ ಮೂಲಕ ಉಚಿತ ಸಲಹೆ, ಸಹಾಯ ಲಭ್ಯವಿರುವುದರಿಂದ ಜನರು ಧೈರ್ಯವಾಗಿ ಮುಂದೆ ಬರಬೇಕು’ ಎಂದರು.

ADVERTISEMENT

‘ಆರೋಗ್ಯಕರ ಜೀವನಶೈಲಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವುದು ಪರಿಣಾಮಕಾರಿ ಪರಿಹಾರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು’ ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಿಲ್ಗ್ರೆಡ್ ಗೊನ್ಸಾಲ್ವೆಸ್ ಮತ್ತು ಶಿಕ್ಷಕರು, ಉಪನ್ಯಾಸಕರು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.