ADVERTISEMENT

ಡ್ರಗ್ಸ್‌ ದಂಧೆ: ವಿದೇಶಿ ಪ್ರಜೆಯ ಬಂಧನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 3:46 IST
Last Updated 23 ಸೆಪ್ಟೆಂಬರ್ 2020, 3:46 IST
ಬಂಧಿತ ಆರೋಪಿ
ಬಂಧಿತ ಆರೋಪಿ   

ಮಡಿಕೇರಿ: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ವಿದೇಶಿ ಪ್ರಜೆಯನ್ನು ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ಕೊನೆಗೂ ಬಂಧಿಸಲು ಯಶಸ್ವಿ ಆಗಿದ್ದಾರೆ.

ದಕ್ಷಿಣ ಆಫ್ರಿಕಾದ ಒಪೊಂಗ್ ಬಂಧಿತ ಆರೋಪಿ.

ಮಡಿಕೇರಿಯಲ್ಲಿಆಗಸ್ಟ್‌ 28ರಂದು ಪೊಲೀಸರು ಕಾರು ತಪಾಸಣೆ ಮಾಡುವಾಗ ಕಾರಿನಲ್ಲಿ ಡ್ರಗ್ಸ್‌ ಪತ್ತೆಯಾಗಿತ್ತು. ಒಂದು ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅಂದೇ ಬಂಧಿಸಿದ್ದರು. ಮತ್ತೊಂದು ಕಾರಿನಲ್ಲಿದ್ದ ಮೂವರು ತಲೆಮರೆಸಿಕೊಂಡಿದ್ದರು. ಅದರಲ್ಲಿ ಇಬ್ಬರನ್ನು 17ರಂದು ಬಂಧಿಸಲಾಗಿತ್ತು. ಅಂದು ಸ್ಥಳದಿಂದ ಪರಾರಿಯಾಗಿದ್ದ ಒಪೊಂಗ್‌ನನ್ನು ಬೆಂಗಳೂರಿನಲ್ಲಿ ಮಂಗಳವಾರ ಬಂಧಿಸಲಾಗಿದೆ. ಈತ, ಕೇರಳ ಸೇರಿದಂತೆ ಮತ್ತಿತರ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.