ಕುಶಾಲನಗರ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಕುಶಾಲನಗರ ವಲಯದ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಪ್ರಸ್ತುತ ಜಿಲ್ಲೆಗೆ ಮುಂಗಾರು ಪ್ರವೇಶಿಸಿದ್ದು ಮಳೆ ಗಾಳಿ ವಿಪರೀತವಾಗಿದ್ದು, ಮುಖ್ಯ ಹೆದ್ದಾರಿಗಳಲ್ಲಿ ಅಡ್ಡಲಾಗಿ ಮರಗಳು ಬೀಳುತ್ತಿದ್ದು, ವಾಹನಗಳ ಓಡಾಟಕ್ಕೆ ಕಷ್ಟಕರವಾಗುತ್ತಿದೆ. ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿಯ ನೀರಿನ ಮಟ್ಟವು ದಿನೇ ದಿನೇ ಹೆಚ್ಚಾಗುತ್ತಿದ್ದು ಪ್ರವಾಸಿಗರನ್ನು ದೋಣಿ ಮುಖಾಂತರ ನದಿ ದಾಟಿಸುವುದು ಅಪಾಯಕಾರಿಯಾಗಿದೆ.
‘ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗೃತ ಕ್ರಮವಾಗಿ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ’ ಎಂದು ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.