ಕುಶಾಲನಗರ: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ದುಬಾರೆ ಸಾಕಾನೆ ಶಿಬಿರದ ನಾಲ್ಕು ಸಾಕಾನೆಗಳಿಗೆ ಭಾನುವಾರ ಬೀಳ್ಕೊಡಲಾಯಿತು.
ದುಬಾರೆಯ ಸಾಕಾನೆಗಳಾದ ‘ಧನಂಜಯ’, ‘ಕಂಜನ್’, ‘ಪ್ರಶಾಂತ’ ಮತ್ತು ‘ಕಾವೇರಿ’ ಆನೆಗಳಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಾವುತರು ಹಾಗೂ ಕಾವಾಡಿಗರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಬೀಳ್ಕೊಟ್ಟರು.
ದುಬಾರೆ ಆನೆ ಶಿಬಿರದಿಂದ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನಹೊಸಹಳ್ಳಿ ಶಿಬಿರಕ್ಕೆ ಲಾರಿಗಳ ಮೂಲಕ ಸಾಗಿಸಲಾಯಿತು.
ಅರಣ್ಯ ಇಲಾಖೆ ಮಡಿಕೇರಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಕನ್ನಂಡ ರಂಜನ್, ಧರ್ಮೇಂದ್ರ ಮತ್ತು ಪಶು ವೈದ್ಯರಾದ ಡಾ. ಚಿಟ್ಟಿಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.