ADVERTISEMENT

ಕೊಡಗು ಜಿಲ್ಲೆಯ ಕೆಲವೆಡೆ ಮತ್ತೆ ಭೂಕಂಪ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 7:19 IST
Last Updated 1 ಜುಲೈ 2022, 7:19 IST
   

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಶುಕ್ರವಾರ ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿದೆ.

ಚೆಂಬು, ಗೂ‌ನಡ್ಕ ಭಾಗದಲ್ಲಿ ಬೆಳಿಗ್ಗೆ 10.50 ರ ಸುಮಾರಿನಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಸುಕಿನಲ್ಲಿಯೂ ಇಲ್ಲಿ 1.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಬೆಳಿಗ್ಗೆ 10.47ರಲ್ಲಿ ಕೊಡಗು ಜಿಲ್ಲೆಯ ಚೆಂಬು ಗ್ರಾಮದ 5.2 ಕಿ.ಮೀ ದೂರದಲ್ಲಿ 2.0. ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ನಸುಕಿನಲ್ಲಿ 1.47 ರಲ್ಲಿಯೂ 1.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.