ADVERTISEMENT

ಜುಲೈ 29ರಂದು ಗರಗಂದೂರು ಬಿ.ಯಲ್ಲಿ ಪರಿಸರ ಸ್ನೇಹಿ ಚಿತಾಗಾರ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 14:10 IST
Last Updated 28 ಜುಲೈ 2024, 14:10 IST

ಸೋಮವಾರಪೇಟೆ: ಇಲ್ಲಿನ ಲಯನ್ಸ್ ಸಂಸ್ಥೆ ವತಿಯಿಂದ ಸಮೀಪದ ಹೊಸತೋಟದ ಗರಗಂದೂರು ಬಿ.ಯಲ್ಲಿ ನಿರ್ಮಿಸಿರುವ ಹೈಟೆಕ್ ಪರಿಸರ ಸ್ನೇಹಿ ಚಿತಾಗಾರ ಲೋಕಾರ್ಪಣೆ ಜುಲೈ 29ರಂದು ಸಂಜೆ 4ಕ್ಕೆ ನಡೆಯಲಿದೆ.

ಬೆಂಗಳೂರಿನ ಲಯನ್ಸ್ ಕ್ಲಬ್‌ನ ಸಿ. ಯುಧಿಷ್ಟಿರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಮಹೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ಬಿ.ಎಸ್. ರಾಜಶೇಖರಯ್ಯ, ವಲಯಾಧ್ಯಕ್ಷ ಚೆಟ್ಟಿಮಾಡ ಕೆ. ರೋಹಿತ್, ಖಜಾಂಚಿ ಕೆ.ಡಿ. ವೀರಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯದರ್ಶಿ ಸಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT