ಕುಶಾಲನಗರ: ಬೆಳಕಿನ ಹಬ್ಬ ದೀಪಾವಳಿ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಜನಜಾಗೃತಿ ಮೂಡಿಸುವ ಪರಿಸರ ಆಂದೋಲನ ನಡೆಸಲಾಯಿತು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಅಪಾಯಕಾರಿ ಪಟಾಕಿ ತ್ಯಜಿಸಿ, ಹಣತೆ ಬೆಳಗಿಸಬೇಕು. ಸುರಕ್ಷತಾ ಕ್ರಮಗಳ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಮಕ್ಕಳಿಗೆ ಹಣತೆ ಹಚ್ಚೋಣ ಬನ್ನಿ, ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ ಎಂದು ಸಲಹೆ ನೀಡಿದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ
ಮಾತನಾಡಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆ ಮಾಡಬೇಕು. ಮಾಲಿನ್ಯವನ್ನುಂಟು ಮಾಡುವ ಪಟಾಕಿ ಸಿಡಿಸುವುದರಿಂದಾಗುವ ಅನಾಹುತದ ಬಗ್ಗೆ ಎಲ್ಲರಿಗೂ ಮನವರಿಕೆ ಮಾಡಬೇಕು ಎಂದರು.
ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್,ಹಸಿರು ದೀಪಾವಳಿ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮಾತನಾಡಿದರು.
ಈ ಸಂದರ್ಭ ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ ಸನ್, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ಶಾಲಾ ಗೈಡ್ಸ್ ಶಿಕ್ಷಕಿ ಸಿಫಾನತ್, ಸ್ಕೌಟ್ಸ್ ಶಿಕ್ಷಕ ಜಾನ್ ಸನ್, ಶಿಕ್ಷಕಿಯವರಾದ ಪ್ರಿಯಾ, ಸುನೀತಾ, ಅರ್ಪಣಾ, ಪುರಸಭೆಯ ಸಿಬ್ಬಂದಿ ಆಲಿಯಾ ಬಾನು,ಕೀರ್ತಿ ಕುಮಾರಿ, ಸ್ವಚ್ಚತಾ ಮೇಸ್ತ್ರಿ ಮೋಹನ್ ಕುಮಾರ್, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.