ADVERTISEMENT

ಕುಶಾಲನಗರ: ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 3:42 IST
Last Updated 27 ಆಗಸ್ಟ್ 2025, 3:42 IST
ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಮಂಗಳವಾರ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು 
ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಮಂಗಳವಾರ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು    

ಕುಶಾಲನಗರ: ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲೆಯ ನೇಸರ ಇಕೋ ಕ್ಲಬ್ ಸಹಯೋಗದೊಂದಿಗೆ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ ನಡೆಯಿತು.

ಪರಿಸರ ಅಧಿಕಾರಿ ರಘುರಾಮ್ ಮಾತನಾಡಿ, ‘ಸರ್ಕಾರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು
ಆಯಾ ಆಯಾ ಊರುಗಳಲ್ಲಿ ಸ್ಥಳೀಯ ಸಂಸ್ಥೆಗಳು ಗಣೇಶ ವಿಸರ್ಜನೆಗೆ ನಿಗದಿಪಡಿಸಿರುವ ಸ್ಥಳೀಯ ಹೊಂಡಗಳಲ್ಲಿ ಮಾತ್ರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು ಎಂದು ನಾಗರಿಕರಲ್ಲಿ ಕೋರಿದ್ದಾರೆ.

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಫಾತಿಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ಸನ್, ಶಾಲೆಯ ಶಿಕ್ಷಕಿ ಅನಿತಾ ಸುಪ್ರಿಯ ಮಾತನಾಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್, ಗೈಡ್ಸ್ ಶಿಕ್ಷಕಿ ಬಿ.ಎಂ. ಶಿಫಾನತ್, ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.