
ಪ್ರಜಾವಾಣಿ ವಾರ್ತೆ
ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಧನಗಾಲ್ ಗ್ರಾಮದಲ್ಲಿ ಕಾಳು ಮೆಣಸು ಕೊಯ್ಯುವಾಗ ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೆ ಒಳಗಾದ ಕಾರ್ಮಿಕ ಪುಷ್ಪಗಿರಿ (45) ಗುರುವಾರ ಮೃತಪಟ್ಟಿದ್ದಾರೆ.
‘ಅವರು ಅಲ್ಯುಮಿನಿಯಂ ಏಣಿ ಏರಿ ಮೆಣಸು ಕೊಯ್ಯುತ್ತಿದ್ದರು. ಆಗ ಆಕಸ್ಮಿಕವಾಗಿ ಏಣಿ ವಿದ್ಯುತ್ ತಂತಿಗೆ ತಗುಲಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.