ADVERTISEMENT

ಸೋಮವಾರಪೇಟೆ:ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟುಂಬಕ್ಕೆ ₹20ಲಕ್ಷ ಪರಿಹಾರ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 5:45 IST
Last Updated 4 ಜನವರಿ 2026, 5:45 IST
<div class="paragraphs"><p>ಸೋಮವಾರಪೇಟೆ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಪೊನ್ನಪ್ಪ ಅವರ ನಿವಾಸಕ್ಕೆ ಶುಕ್ರವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ, ಮನೆಮಂದಿಗೆ ಸಾಂತ್ವನ ಹೇಳಿದರು</p></div>

ಸೋಮವಾರಪೇಟೆ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಪೊನ್ನಪ್ಪ ಅವರ ನಿವಾಸಕ್ಕೆ ಶುಕ್ರವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ, ಮನೆಮಂದಿಗೆ ಸಾಂತ್ವನ ಹೇಳಿದರು

   

ಸೋಮವಾರಪೇಟೆ: ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟದ ಪೊನ್ನಪ್ಪ ಅವರ ಮನೆಗೆ ಶುಕ್ರವಾರ  ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ ಸಾಂತ್ವನ ತಿಳಿಸಿದರು.

ಈಚೆಗೆ ಕೃಷಿ ಕೆಲಸಕ್ಕೆ ತಮ್ಮ ಜಮೀನಿಗೆ ತೆರಳಿದ್ದ ಸಂದರ್ಭ ಆನೆ ದಾಳಿಯಿಂದ ಮೃತಪಟ್ಟಿದ್ದರು.  ಕುಟುಂಬಸ್ಥರೊಂದಿಗೆ ಮಾತನಾಡಿದ ಶಾಸಕರು, ಸರ್ಕಾರ ನೀಡಿದ ₹20 ಲಕ್ಷ  ಪರಿಹಾರದ ಚೆಕ್ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.

ADVERTISEMENT

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಬಿ.ಬಿ. ಸತೀಶ್, ಎಸಿಎಫ್ ಗೋಪಾಲ್ ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.