ADVERTISEMENT

ನಾಪೋಕ್ಲು | ಕಾಡಾನೆ ದಾಳಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 13:42 IST
Last Updated 16 ಜೂನ್ 2020, 13:42 IST
ಕಾಫಿ ತೋಟದಲ್ಲಿ ಕಾಡಾನೆ (ಪ್ರಾತಿನಿಧಿಕ ಚಿತ್ರ)
ಕಾಫಿ ತೋಟದಲ್ಲಿ ಕಾಡಾನೆ (ಪ್ರಾತಿನಿಧಿಕ ಚಿತ್ರ)   

ನಾಪೋಕ್ಲು (ಕೊಡಗು): ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ವೇಳೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗ್ರಾಮದ ಕುಡಿಯರ ಚಿಣ್ಣಪ್ಪ (70) ಸಾವನ್ನಪ್ಪಿದವರು.

ಕುಡಿಯರ ಚಿಣ್ಣಪ್ಪ

ನಾಲಡಿ ಗ್ರಾಮದ ಪೂಮಾಲೆ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಚಿಣ್ಣಪ್ಪ ಕೆಲಸ ಮುಗಿಸಿಕೊಂಡು ಯವಕಪಾಡಿ ಗ್ರಾಮದ ತನ್ನ ಮನೆಗೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಅರಣ್ಯ ಇಲಾಖೆಯ ಆರ್.ಎಫ್.ಒ ಎಚ್.ಜಿ.ದೇವರಾಜ್, ಉಪ ವಲಯ ಅರಣ್ಯಾಧಿಕಾರಿ ಶ್ರೀಧರ್, ಕಾಳೇಗೌಡ.ಎಸ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿ, ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.