ಕುಶಾಲನಗರ: ಸಾಮಾಜಿಕ, ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತೆರಳುವಾಗ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡು ಗಾಯಗೊಂಡಿದ್ದ ಗೋಣಿಕೊಪ್ಪ ಅನುದಾನಿತ ಪ್ರೌಢ ಶಾಲೆಯ ಕಚೇರಿ ಸಿಬ್ಬಂದಿ ಶಿವರಾಮ್ ಮನೆಗೆ ಜಿಲ್ಲಾ ಅನುದಾನಿತ ಪ್ರೌಢಶಾಲೆ ಶಿಕ್ಷಕರು, ನೌಕರರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಜಿಲ್ಲಾ ಕಾರ್ಯದರ್ಶಿ ಎಸ್. ನಾಗರಾಜ್ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡು ಗಾಯಗೊಂಡಿರುವ ಸಿಬ್ಬಂದಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಸಮೀಕ್ಷೆಯಿಂದ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹಾಸಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಜಿಲ್ಲಾ ಅಧಿಕಾರಿಗಳನ್ನು ಭೇಟಿ ಮಾಡಿ ಗಮನಕ್ಕೆ ತರಲಾಗುವುದು ಎಂದು ನಾಗರಾಜು ತಿಳಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಗಿಡ್ಡಯ್ಯ ಮತ್ತು ಗುಳ್ಳದಪ್ಪ, ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.