ADVERTISEMENT

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಡಾನೆ ದಾಳಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 7:19 IST
Last Updated 3 ಜನವರಿ 2020, 7:19 IST
ಆನೆ ದಾಳಿಗೆ ಒಳಗಾದ ಬಾಲಕಿ
ಆನೆ ದಾಳಿಗೆ ಒಳಗಾದ ಬಾಲಕಿ   

ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಇಂಜಲಗೆರೆಯಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಡಾನೆ ದಾಳಿ ನಡೆಸಿದೆ.

ಆನೆ ದಾಳಿಯಿಂದ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಯುವಶ್ರೀ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯಶ್ರೀ ಕಾಲಿಗೆ ಗಾಯವಾಗಿದೆ.

ಇಬ್ಬರೂ ಇಂಜಲಗೆರೆ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶುಕ್ರವಾರ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕಾಫಿ ತೋಟದಿಂದ ರಸ್ತೆಗೆ ಬಂದ ಆನೆ ದಾಳಿ ನಡೆಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.