
ಪ್ರಜಾವಾಣಿ ವಾರ್ತೆ
ಸಿದ್ದಾಪುರ: ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಎಂ.ಎಂ ಗಿರೀಶ್ ಎಂಬುವರಿಗೆ ಸೇರಿದ ಕಾಫಿ ತೋಟದಲ್ಲಿ ಶುಕ್ರವಾರ ಕಾರ್ಮಿಕರು ಕೆಲಸಕ್ಕೆ ತೆರಳುವ ಸಂದರ್ಭ ಆನೆ ಸಾವನ್ನಪ್ಪಿರುವುದು ತಿಳಿದುಬಂದಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಆನೆ ಅಂದಾಜು 18 ವರ್ಷ ಪ್ರಾಯವಿದ್ದು, ಒಂದು ವಾರದ ಹಿಂದೆ ಸಾವನ್ನಪ್ಪಿರಬಹುದು. ಕಾಡಾನೆಗಳ ಕಾಳಗದಿಂದ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಎ.ಸಿ.ಎಫ್ ಎ.ಎ ಗೋಪಾಲ್, ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಅರಣ್ಯ ವೈದ್ಯಾಧಿಕಾರಿ ಚಿಟ್ಟಿಯಪ್ಪ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ಬಳಿಕ ಕಳೇಬರವನ್ನು ಸ್ಥಳದಲ್ಲೇ ಗುಂಡಿ ತೋಡಿ, ಹೂಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.