ADVERTISEMENT

ಕೆರೆ ನೀರಲ್ಲಿ ಮುಳುಗಿ ಕಾಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 14:11 IST
Last Updated 25 ಮಾರ್ಚ್ 2019, 14:11 IST
ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದ ಕೆರೆಯ ನೀರಲ್ಲಿ ಸಿಲುಕಿ ಮೃತಪಟ್ಟಿರುವ ಕಾಡಾನೆ
ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದ ಕೆರೆಯ ನೀರಲ್ಲಿ ಸಿಲುಕಿ ಮೃತಪಟ್ಟಿರುವ ಕಾಡಾನೆ   

ಗೋಣಿಕೊಪ್ಪಲು: ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದ ಕಾಫಿ ತೋಟದ ಕೆರೆಯಲ್ಲಿ ನೀರು ಕುಡಿಯಲು ಬಂದಿದ್ದ ಕಾಡಾನೆಯೊಂದು ಸಾವನ್ನಪಿದೆ. ಮೂರು ದಿನಗಳ ಹಿಂದೆ ಕಾಡಾನೆ ಸಾವನ್ನಪಿರುವ ಶಂಕೆ ವ್ಯಕ್ತವಾಗಿದ್ದು ಸೋಮವಾರ ಬೆಳಕಿಗೆ ಬಂದಿದೆ.

ಮೃತಪಟ್ಟ ಗಂಡಾನೆಗೆ 15 ವರ್ಷ ಇರುಬಹುದು ಎಂದು ಅಂದಾಜಿಸಲಾಗಿದೆ. ಪಶುವೈದ್ಯ ರೆಹಮಾನ್‌ ಅವರು ಮರಣೋತ್ತರ ಪರೀಕ್ಷೆ ನಡೆಸಿದರು ಎಂದು ವಿರಾಜಪೇಟೆ ಡಿಎಫ್‌ಒ ಮರಿಯಾ ಕ್ರಿಸ್ತರಾಜ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲೂ ಬೇಸಿಗೆ ಬೇಗೆ ಹೆಚ್ಚಾಗುತ್ತಿದ್ದು ಅರಣ್ಯ ಪ್ರದೇಶದಲ್ಲಿದ್ದ ಕೆರೆಗಳಲ್ಲಿ ನೀರು ಕಡಿಮೆಯಾಗಿದೆ. ಕಾಡಾನೆಗಳಿಗೆ ಅರಣ್ಯದಲ್ಲಿ ನೀರು ಲಭ್ಯವಾಗುತ್ತಿಲ್ಲ. ಹದಿನೈದು ದಿನಗಳ ಹಿಂದೆಯೂ ದಾಹ ನೀಗಿಸಿಕೊಳ್ಳಲು ಚೇಲಾವರ ಗ್ರಾಮದ ಕಾಫಿ ತೋಟದ ಕೆರೆಗೆ ಬಂದಿದ್ದ ಮೂರು ಆನೆಗಳು ನೀರಿನಲ್ಲಿ ಸಿಲುಕಿ ಮೇಲೆ ಬರಲು ಸಾಧ್ಯವಾಗದೇ ಪರದಾಡಿದ್ದವು. ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನೂ ರಕ್ಷಣೆ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.