ADVERTISEMENT

ಕೊಡಗು; ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 27 ಮೇ 2023, 9:28 IST
Last Updated 27 ಮೇ 2023, 9:28 IST
   

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಕುಟ್ಟ ಗ್ರಾಮದ ಕಾಫಿ ತೋಟವೊಂದರಲ್ಲಿ ವಿದ್ಯುತ್ ತಂತಿ ಸೊಂಡಿಲಿಗೆ ತಗುಲಿ ಕಾಡಾನೆಯೊಂದು ಶನಿವಾರ ಮೃತಪಟ್ಟಿದೆ.

ಕಾಫಿ ತೋಟದ ಮಧ್ಯೆ 11 ಕೆ.ವಿ‌ ಸಾಮರ್ಥ್ಯದ ವಿದ್ಯುತ್ ತಂತಿ ಹಾದು ಹೋಗಿತ್ತು. ಇದು ಸೊಂಡಿಲಿಗೆ ತಗುಲಿ ಆನೆಯು ಸ್ಥಳದಲ್ಲೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT