ADVERTISEMENT

ಸಿದ್ದಾಪುರ: ತೋಟದಲ್ಲಿ ಬೀಡುಬಿಟ್ಟ ಕಾಡಾನೆ ಹಿಂಡು

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 14:55 IST
Last Updated 15 ಜುಲೈ 2020, 14:55 IST
ಗುಹ್ಯ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆ ಹಿಂಡು
ಗುಹ್ಯ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆ ಹಿಂಡು   

ಸಿದ್ದಾಪುರ: ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಮರಿ ಆನೆ ಸೇರಿದಂತೆ ಸುಮಾರು 9 ಕಾಡಾನೆಗಳಿರುವ ಹಿಂಡು ಗುಹ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿಯಲ್ಲೇ ಹಾದುಹೋಗಿದ್ದು, ಸ್ಥಳೀಯರು ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಈ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಾನೆಗಳನ್ನು ಕಾಡಿಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT