ಮಡಿಕೇರಿ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಕೊಯನಾಡು ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಕೆಲವು ಸಂತ್ರಸ್ತರು ತಮಗೆ ಸರ್ಕಾರ ನೀಡಿದ ಪರಿಹಾರ ಏನೇನೂ ಸಾಲದು ಎಂದು ಅಳಲು ತೋಡಿಕೊಂಡರು.
ಇದನ್ನೂ ಓದಿ:ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.