ಯೋಧರು
ಸಾಂದರ್ಭಿಕ ಚಿತ್ರ
ವಿರಾಜಪೇಟೆ: ‘ದೇಶದ ರಕ್ಷಣೆಗೆ ನಾವು ಸದಾ ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಾದರೂ ನಮ್ಮನ್ನು ಆಹ್ವಾನಿಸಿದರೆ ಮುಕ್ತ ಮನಸ್ಸಿನಿಂದ ದೇಶ ಸೇವೆ ಮಾಡುತ್ತೇವೆ’ ಎಂದು ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ತಿಳಿಸಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಮೇಲಿನ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಉಗ್ರರ ಅಡಗು ತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿ, ಧ್ವಂಸಗೊಳಿಸಿರುವುದು ಸ್ವಾಗತಾರ್ಹ. ಈ ಹಿಂದೆಯೂ ಭಾರತದ ಮೇಲೆ ಅನೇಕ ರೀತಿಯ ಭಯೋತ್ಪಾದಕ ದಾಳಿ ನಡೆಸಲಾಗಿದೆ. ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲಿನ ದಾಳಿಗೆ ಸೇನೆ ತಕ್ಕ ಉತ್ತರ ನೀಡುತ್ತಿದೆ. ಇನ್ನು ಮುಂದೆಯೂ ಭಯೋತ್ಪಾದಕರು ಭಾರತದ ತಂಟೆಗೆ ಬಾರದ ರೀತಿಯಲ್ಲಿ ತಕ್ಕ ಪಾಠ ಕಲಿಸಬೇಕಿದೆ’ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ರಾಜ ಚಂದ್ರಶೇಖರ್, ಮಾಜಿ ಅಧ್ಯಕ್ಷ ಪುಗ್ಗೆರ ನಂದಾ, ನಿರ್ದೇಶಕರಾದ ಸಲಾಂ ಕಡಂಗ, ಪಟ್ರಪಂಡ ಸೋಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.