
ಕುಶಾಲನಗರ: ‘ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಉತ್ತಮ ಜೀವನಮೌಲ್ಯಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಉ.ರಾ.ನಾಗೇಶ್ ಹೇಳಿದರು.
ಪಟ್ಟಣದ ಬೈಚನಹಳ್ಳಿ ಬಳಿ ಇರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ದ್ವಿತೀಯ ಪಿಯುಸಿ ಪರೀಕ್ಷೆ ಹತ್ತಿರ ಬಂದಿದ್ದು, ಸಮಯವನ್ನು ವ್ಯರ್ಥ ಮಾಡದೆ ಮೊಬೈಲ್ ಬಳಕೆಯನ್ನು ದೂರ ಮಾಡಿ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದರು.
ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು’ ಎಂದರು.
ಪ್ರಾಂಶುಪಾಲೆ ಕ್ಲಾರ ರೇಷ್ಮಾ ಶುಭಹಾರೈಸಿದರು. ಸಾಹಿತ್ಯ ಸೇವೆಗೆ ಹಾಗೂ ಉತ್ತಮ ನಿರೂಪಕ ಪ್ರಶಸ್ತಿ ಪುರಸ್ಕೃತ ಉ.ರಾ.ನಾಗೇಶ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳು,
ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಥಮ ಪಿಯು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮನ ರಂಜಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.