ಸೋಮವಾರಪೇಟೆ: ತಾಲ್ಲೂಕಿನಲ್ಲಿ ಮಂಗಳವಾರ ವಿವಿಧ ಪಕ್ಷಗಳು, ಸಂಘಟನೆಗಳು ಕರೆ ನೀಡಿದ್ದ ತಾಲ್ಲೂಕು ಬಂದ್ ಯಶಸ್ವಿಯಾಗಿದೆ.
'ಸಿ’ ಮತ್ತು ‘ಡಿ’ ದರ್ಜೆಯ ಭೂಮಿಯಲ್ಲಿ (ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ) ಸಾಗುವಳಿ ಮಾಡುತ್ತಿರುವ ರೈತರ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಹಾಗೂ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿ ರೈತ ಹೋರಾಟ ಸಮಿತಿ ತಾಲ್ಲೂಕು ಬಂದ್ ಗೆ ಕರೆ ನೀಡಿತ್ತು.
ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲೂ ಬಂದ್ ನಡೆಯಿತು.
ಖಾಸಗಿ ಶಾಲೆಗಳಿಗೆ ಒಂದು ದಿನದ ಮುನ್ನವೇ ರಜೆ ನೀಡಲಾಗಿತ್ತು. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬಾರದೇ ಇದ್ದದ್ದರಿಂದ ತರಗತಿಗಳು ನಡೆಯಲಿಲ್ಲ. ಬಸ್ ಸಂಚಾರ ಸ್ಥಗಿತಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.